ಆಸ್ಪತ್ರೆಯಲ್ಲೇ ನೇಣುಬಿಗಿದುಕೊಂಡು ಕೊರೊನಾ ಸೋಂಕಿತ ವೃದ್ಧೆ ಆತ್ಮಹತ್ಯೆಗೆ ಶರಣು…

177
firstsuddi

ಬೆಂಗಳೂರು : ಕೊರೊನಾ ಸೋಂಕಿತೆ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತ 60 ವರ್ಷದ ವೃದ್ಧೆಗೆ ಕೊರೊನಾ ಸೋಂಕು ದೃಢವಾದ ಬಳಿಕ ಜೂನ್.18 ರಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಮುಂಜಾನೆ 2:30ರ ಸುಮಾರಿಗೆ ಆಸ್ಪತ್ರೆಯಲ್ಲೇ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ ವೃದ್ಧೆಯ ಮಗ, ಸೊಸೆ ಹಾಗೂ ಮೊಮ್ಮಗನಿಗೂ ಕೂಡಾ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.