ಬಳ್ಳಾರಿ : ಇಂಜಿನ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಹಾರಕನಾಳ್ ಸಣ್ಣ ತಾಂಡಾದ ಬಳಿ ನಡೆದಿದೆ. ಕಾರಿನಲ್ಲಿ ನಾಲ್ಕು ಮಂದಿ ಹರಪ್ಪನಹಳ್ಳಿಯಿಂದ ವಿಂಡ್ ಫ್ಯಾನ್ ಘಟಕಕ್ಕೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತುಕೊಂಡ ನಾಲ್ವರು ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.










