ಮೈಸೂರು : ಇಂದಿನಿಂದ(ಅ.5ರ)ಬೆಳಗಿನ ಜಾವ 4 ಗಂಟೆಯಿಂದ ಅ.7ರ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ನಾಳೆ ಮಹಾಲಯ ಅಮಾವಾಸ್ಯೆ ಹಿನ್ನಲೆ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ.
ಅದೇ ರೀತಿ, ಅಕ್ಟೋಬರ್ 7ರಂದು ಮೈಸೂರು ದಸರಾ 2021ರ ಉದ್ಘಾಟನಾ ಮಹೋತ್ಸವ ನೆರವೇರಲಿದ್ದು, ಇಂದಿನಿಂದ ಅಕ್ಟೋಬರ್ 07ರ ಮಧ್ಯಾಹ್ನದ ವರೆಗೂ ನಿರ್ಬಂಧ ಹೇರಲಾಗಿದೆ.










