ನವದೆಹಲಿ : ಸಂಸತ್ತಿನಲ್ಲಿ ಎರಡನೇ ಹಂತದ ಬಜೆಟ್ ಅಧಿವೇಶನ ಇಂದಿನಿಂದ ಶುರುವಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು – ಕಾಶ್ಮೀರದ 2022-23 ನೇ ಸಾಲಿನ ಆಯವ್ಯಯವನ್ನು ಇಂದು ಮಂಡಿಸಲಿದ್ದಾರೆ.
ಅಧಿವೇಶನದಲ್ಲಿ ಪ್ರತಿಪಕ್ಷಗಳು ನಿರುದ್ಯೋಗ, ಉದ್ಯೋಗಿಗಳ ಭವಿಷ್ಯ ನಿಧಿ ಮೇಲಿನ ಬಡ್ಡಿದರದಲ್ಲಿ ಕಡಿತ ಮತ್ತು ಯುದ್ಧ ಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಸೇರಿದಂತೆ ಹಲವಾರು ವಿಷಯಗಳನ್ನು ಪ್ರಸ್ತಾಪಿಸುವ ನಿರೀಕ್ಷೆಯಿದೆ.
ಬಜೆಟ್ ಅಧಿವೇಶನದ ಮೊದಲಾರ್ಧವು ಫೆಬ್ರವರಿ 1ರಿಂದ 11ರವರೆಗೆ ನಡೆದಿತ್ತು. ಇಂದು ಎರಡನೇ ಹಂತದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಏಪ್ರಿಲ್ 8ಕ್ಕೆ ಕೊನೆಗೊಳ್ಳಲಿದೆ.










