ಇಂದಿನಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ…

65
firstsuddi

ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಜುಲೈ 4ರವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು ನಡೆಯಲಿದೆ.

ಪೂರಕ ಪರೀಕ್ಷೆಗೆ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದು, 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಲ್ಲಿ ಉಚಿತ ಪ್ರಯಾಣದ ಅವಕಾಶವನ್ನ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡಬಹುದಾಗಿದೆ.