ಬೆಂಗಳೂರು : ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ಮೇ 18ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಯಶಸ್ವಿಯಾಗಿ ನಡೆಸಲು ಎಲ್ಲ ಬಿಗಿ ಕ್ರಮ ನಡೆಸಲಾಗಿದೆ. ಕೋವಿಡ್ ಪ್ರಕರಣಗಳು ಕಡಿಮೆ ಇದ್ದರೂ ಸಹ ಆತಂಕ ನಿವಾರಣೆಯಾಗದ ಹಿನ್ನಲೆ ಆರೋಗ್ಯ ಇಲಾಖೆಯ ಎಸ್ ಒಪಿ ಪ್ರಕಾರ ಪರೀಕ್ಷೆ ಕೇಂದ್ರಗಳಲ್ಲಿ ಸಿದ್ಧತೆ ನಡೆಸಲಾಗಿದೆ.
ಈ ಬಾರಿ ಪರೀಕ್ಷೆಗೆ 5241 ಕಾಲೇಜುಗಳಿಂದ 6,84,255 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಇಂದು ಮೊದಲ ಪರೀಕ್ಷೆ ತರ್ಕಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ವಿಷಯ ಇರಲಿದೆ. ಬೆಳಗ್ಗೆ 10: 15 ರಿಂದ ಮಧ್ಯಾಹ್ನ 1:3 0ರವರೆಗೆ ಪರೀಕ್ಷೆ ನಡೆಯಲಿದೆ.
ಇನ್ನು ಎಸ್ಎಸ್ಎಲ್ ರೀತಿಯಲ್ಲಿ ಪಿಯು ಪರೀಕ್ಷೆಗೂ ಸಮವಸ್ತ್ರ ನಿಯಮ ಜಾರಿಯಾಗಿದೆ. ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಇಲ್ಲ. ಹೀಗಾಗಿ ಪರೀಕ್ಷಾರ್ಥಿಗಳಿಗೆ ಸಮವಸ್ತ್ರ ನಿಯಮ ಪಾಲನೆ ಮಾಡುವುದು ಅವಶ್ಯ ಆಗಿದೆ. ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಇರಲಿದ್ದು, 200 ಮೀಟರ್ ನಿಷೇದಾಜ್ಞೆ ಜಾರಿಯಾಗಿದೆ.










