ಇಂದಿನಿಂದ ರಾಜ್ಯದಲ್ಲಿ ಕೋವಿಡ್ ಟಫ್ ರೂಲ್ಸ್ ; ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ…

88
firstsuddi

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕಾಗಿ ಮತ್ತಷ್ಟು ಕಠಿಣ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇಂದಿನಿಂದ(ಏಪ್ರಿಲ್ 21ರ) ರಾತ್ರಿ 9 ಗಂಟೆಯಿಂದ ಮೇ 4ರ ಬೆಳಗ್ಗೆ 6 ಗಂಟೆಯವರೆಗೂ ರಾಜ್ಯದಲ್ಲಿ ಕಠಿಣ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ಅನಗತ್ಯವಾಗಿ ಯಾರೂ ಓಡಾಡುವಂತಿಲ್ಲ. ಓಡಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ 14 ದಿನ ರಾಜ್ಯದಲ್ಲಿ ಏನೆಲ್ಲಾ ಇರುತ್ತದೆ? ಹಾಗೂ ಏನೆಲ್ಲಾ ಬಂದ್? ಇಲ್ಲಿದೆ ಸಂಪೂರ್ಣ ಮಾಹಿತಿ.

ಏನೆಲ್ಲಾ ಇರುತ್ತವೆ?
• ಆಹಾರ ಸಂಬಂಧಿ ಅಂಗಡಿಗಳು, ದಿನಸಿ ಅಂಗಡಿ, ಹಣ್ಣು ತರಕಾರಿ ಅಂಗಡಿ, ಮಿಲ್ಕ್ ಬೂತ್, ಮೀನು ಮಾಂಸದ ಅಂಗಡಿ, ಔಷದ, ವೈದ್ಯಕೀಯ ಸೌಲಭ್ಯಗಳು ಲಭ್ಯ
• ಬ್ಯಾಂಕ್, ಎಟಿಎಂ ಸೇವೆಗಳು ಲಭ್ಯ
• ಮೆಟ್ರೋ, ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಅನುಮತಿ
• ಜಿಲ್ಲೆಗಳ ನಡುವೆ ಮತ್ತು ರಾಜ್ಯಗಳ ನಡುವೆ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ
• ಇ ಕಾಮರ್ಸ್ ವೇದಿಕೆಯಲ್ಲಿ ಡೆಲಿವರಿ ಮಾಡಲು ಅನುಮತಿ
• ಮದುವೆಗಳಲ್ಲಿ ಕೇವಲ 50 ಜನರಿಗೆ ಅವಕಾಶ, ಅಂತ್ಯಕ್ರಿಯೆಗಳಲ್ಲಿ ಕೇವಲ 20 ಜನರಿಗೆ ಅವಕಾಶ
• ಸರ್ಕಾರಿ ಕಚೇರಿಗಳಲ್ಲಿ ಶೇ. 50 ಸಿಬ್ಬಂದಿ ಕೆಲಸಕ್ಕೆ ಅನುಮತಿ
• ಐಟಿ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಹೊರೆತುಪಡಿಸಿ ಬೇರೆಲ್ಲ ಸಿಬ್ಬಂದಿಗೆ ವರ್ಕ್ ಫ್ರಂ ಹೋಂ
• ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ ಮಾತ್ರಕ್ಕೆ ಅವಕಾಶ
• ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮತಿ
• ಕಾರ್ಖಾನೆಗಳಲ್ಲಿ ಕೆಲಸ ನಡೆಸಲು ಅನುಮತಿ
• ಲಾಡ್ಜ್ಗಳನ್ನು ತೆರೆದಿಡಲು ಅನುಮತಿ
• ಬಾರ್, ಎಂಆರ್ ಪಿಗಳಲ್ಲಿ ಪಾರ್ಸಲ್ ನೀಡಲು ಮಾತ್ರ ಅವಕಾಶ
• ಬ್ಯೂಟಿ ಪಾರ್ಲರ್, ಸಲೂನ್ ಗಳು ತೆರೆದಿರುತ್ತವೆ

ಏನೆಲ್ಲಾ ಬಂದ್?
• ಶಾಲೆ, ಕಾಲೇಜುಗಳು ಸಂಪೂರ್ಣವಾಗಿ ಬಂದ್. ಆನ್ ಲೈನ್ ತರಗತಿಗೆ ಮಾತ್ರವೇ ಅವಕಾಶ
• ಸಿನಿಮಾ ಹಾಲ್ ಗಳು, ಶಾಪಿಂಗ್ ಮಾಲ್ ಗಳು, ಜಿಮ್, ಯೋಗಾ ಸೆಂಟರ್, ಸ್ವಿಮ್ಮಿಂಗ್ ಪೂಲ್, ಸ್ಪೋರ್ಟ್ಸ್ ಕಾಂಪ್ಲೆಕ್ಸ್, ಸ್ಪಾ, ಬಾರ್, ಆಡಿಟೋರಿಯಂನಂತಹ ಸ್ಥಳಗಳು ಮುಚ್ಚಲಾಗುವುದು
• ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾದಿಂದ ಅನುಮತಿ ಪಡೆದ ಸ್ವಿಮ್ಮಿಂಗ್ ಫೂಲ್ ಗಳನ್ನು ಮಾತ್ರ ತೆರೆಯಲು ಅನುಮತಿ
• ಸಾರ್ವಜನಿಕ, ರಾಜಕೀಯ ಸೇರಿ ಎಲ್ಲ ಕಾರ್ಯಕ್ರಮಗಳಿಗೆ ನಿರ್ಬಂಧ
• ದೇವಸ್ಥಾನ ಸೇರಿ ಎಲ್ಲ ಧಾರ್ಮಿಕ ಸ್ಥಳಗಳನ್ನು ಮುಚ್ಚಲಾಗುವುದು