ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭ…

53
firstsuddi

ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಮತ್ತು ಅನುದಾನಿತರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2022-23ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದೆ.

ಎರಡು ವರ್ಷ ಕೊರೊನಾದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ 15 ದಿನ ಮುಂಚಿತವಾಗಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದ್ದು, ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದೆ.

ವಿದ್ಯಾರ್ಥಿಗಳನ್ನು ಶಾಲೆಗೆ ಅದ್ಧೂರಿಯಾಗಿ ಸ್ವಾಗತ ಮಾಡಿಕೊಳ್ಳಲು ಶಾಲಾ ಆಡಳಿತಾಧಿಕಾರಿಗಳು, ಸಿಬ್ಬಂದಿ ಸಿದ್ಧತೆ ಮಾಡಿಕೊಂಡಿದ್ದಾರೆ. ಶಾಲೆಗಳನ್ನು ತಳಿರು-ತೋರಣಗಳಿಂದ ಅಲಂಕರಿಸಲಾಗಿದೆ. ಮಕ್ಕಳಿಗೆ ಇಷ್ಟವಾಗುವ ಗಿಫ್ಟ್ , ಸ್ವೀಟ್ ಕೊಟ್ಟು ಆತ್ಮೀಯವಾಗಿ ಬರಮಾಡಿಕೊಳ್ಳಲಾಗುತ್ತಿದೆ.