ಇಂದಿನಿಂದ ವಿಶ್ವಕಪ್ ಆರಂಭ; ಇಂಗ್ಲೆಂಡ್-ನ್ಯೂಝಿಲೆಂಡ್ ನಡುವೆ ಹೈವೋಲ್ಟೇಜ್ ಪಂದ್ಯ…

75
firstsuddi

ನವದೆಹಲಿ: ಇಂದಿನಿಂದ ಕ್ರಿಕೆಟ್ ವಿಶ್ವಕಪ್ ಆರಂಭವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ಮತ್ತು ಟಾಮ್ ಲ್ಯಾಥಮ್ ನೇತೃತ್ವದ ನ್ಯೂಝಿಲೆಂಡ್ ಮುಖಾಮುಖಿ ಆಗಿದೆ.

ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬೌಲಿಂಗ್ ಮಾಡಲು ಮುಂದಾಗಿದೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಬ್ಯಾಟಿಂಗ್ ಮಾಡಲು ಆಹ್ವಾನ ನೀಡಿದೆ. ಇದು ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ. ಯಾಕೆಂದರೆ ಐಸಿಸಿ ವಿಶ್ವಕಪ್ 2019 ರ ಫೈನಲ್‌ನಲ್ಲಿ ಉಭಯ ತಂಡಗಳು ಮುಖಾಮುಖಿ ಆಗಿದ್ದವು. ಇದರಲ್ಲಿ ಇಂಗ್ಲೆಂಡ್ ರೋಚಕ ಗೆಲುವು ಸಾಧಿಸಿ ಟ್ರೋಫಿ ಎತ್ತಿ ಹಿಡಿದಿತ್ತು.

ನ್ಯೂಝಿಲೆಂಡ್ ತಂಡಕ್ಕೆ ಇದೊಂದು ಸೇಡಿನ ಪಂದ್ಯ ಕೂಡ ಹೌದು. ಆದರೆ, ಟೀಮ್​ಗೆ ದೊಡ್ಡ ಹಿನ್ನಡೆ ಎಂದರೆ ನಾಯಕ ಕೇನ್ ವಿಲಿಯಮ್ಸನ್ ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಇವರು ಆರಂಭಿಕ ಪಂದ್ಯವನ್ನು ಕಳೆದುಕೊಳ್ಳಲಿದ್ದಾರೆ.