ಇಂದಿನಿಂದ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ…

48
firstsuddi

ಬೆಂಗಳೂರು: ರಾಜ್ಯದ ಹಲವೆಡೆ ಇಂದಿನಿಂದ 3 ದಿನಗಳ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ 27, 28 ಮತ್ತು 29 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೊಡಗು, ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.