ಇಂದಿನ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಗೊತ್ತಾ?

109
First Suddi

ನವದಹಲಿ : ದೇಶದಾದ್ಯಂತ ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದ್ದು, ಪಟ್ರೋಲ್ ದರ 34 ಪೈಸೆಗೆ ಏರಿಕೆಯಾಗಿದ್ದರೆ, ಡೀಸೆಲ್ ದರ 32 ಪೈಸೆಯಷ್ಟು ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ನವದಹಲಿಯಲ್ಲಿ ಪ್ರತಿ ಲೀಟರ್ ಗೆ ಪೆಟ್ರೋಲ್ ದರ 89.88 ರೂ. ಏರಿಕೆ ಕಂಡಿದ್ದರೆ, ಡೀಸೆಲ್ ದರ 80.27 ರೂ. ಗೆ ಏರಿಕೆಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 97.32 ರೂ. ಏರಿಕೆಯಾದರೆ, ಡೀಸೆಲ್ ದರ 87.36 ರೂ. ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 97.32 ರೂ ಗೆ ಏರಿಕೆಯಾದರೆ, ಡೀಸೆಲ್ ದರ 87.36 ರೂ.ಗೆ ಏರಿಕೆಯಾಗಿದೆ. ಹೈದರಾಬಾದ್‍ನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 93.08 ರೂ.ಗೆ ಏರಿಕೆಯಾದರೆ, ಡೀಸೆಲ್ ದರ 87.20 ರೂ.ಗೆ ಏರಿಕೆಯಾಗಿದೆ. ಇನ್ನೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 92.54 ರೂಗೆ ಏರಿಕೆಯಾದರೆ, ಡೀಸೆಲ್ ದರ 84.75 ರೂಗೆ ಏರಿಕೆ ಕಂಡಿದೆ.