ಇಂದು ಎರಡನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ಪ್ರಾರಂಭ- ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮೋದಿ ಮನವಿ…

44
firstsuddi

ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಏಪ್ರಿಲ್ 19 ರಿಂದ ಪ್ರಾರಂಭವಾಗಿದೆ, ಆದ್ದರಿಂದ ಇಂದು ಎರಡನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ದೇಶಾದ್ಯಂತ 13 ರಾಜ್ಯಗಳ 89 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಇಂದು ದೇಶದ ಮತದಾರರು 1200ಕ್ಕೂ ಹೆಚ್ಚು ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಡೀ ದೇಶದ ಜನತೆಗೆ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

ಇದಲ್ಲದೇ ದೇಶದ ಯುವ ಮತದಾರರು ಹಾಗೂ ದೇಶದ ಮಹಿಳಾ ಶಕ್ತಿ ಉತ್ಸಾಹದಿಂದ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಮನವಿ ಮಾಡಿದರು. ಅಸ್ಸಾಮಿ, ಬೆಂಗಾಲಿ, ಮಲಯಾಳಂ, ಕನ್ನಡ, ಹಿಂದಿ, ಇಂಗ್ಲಿಷ್ ಮತ್ತು ಮರಾಠಿ ಏಳು ಭಾಷೆಗಳಲ್ಲಿ ಜನರಿಗೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.

ಹೆಚ್ಚಿನ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ವಿನಂತಿಸುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ ಎಂದಿದ್ದಾರೆ.