ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಪ್ರಕಟ…

47
firstsuddi

ಬೆಂಗಳೂರು: 2022-23ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು (ಮೇ 08) ಪ್ರಕಟವಾಗಲಿದೆ.

ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದೆ. ಬಳಿಕ ಬೆಳಗ್ಗೆ 11 ಗಂಟೆ ನಂತರ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍ karresults.nic.in ನಲ್ಲಿ  ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

2022- 2023ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಕಳೆದ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿತ್ತು. ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಂದು ಆರಂಭವಾಗಿತ್ತು.

ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಇನ್ನು 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.