ಬೆಂಗಳೂರು : ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಇಂದು ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ನೇರಳೆ ಮಾರ್ಗದಲ್ಲಿ ಮೆಟ್ರೋ ನಿಲ್ದಾಣಗಳ ಕಾಮಗಾರಿ ಹಿನ್ನೆಲೆ ಒಂದು ದಿನದ ಮಟ್ಟಿಗೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗುತ್ತೆ. ಇಂದು ರಾತ್ರಿ 09.30 ಗಂಟೆಯಿಂದ ಬೈಯಪ್ಪನಹಳ್ಳಿಯಿಂದ ಎಂಜಿ ರಸ್ತೆವರೆಗಿನ ನೇರಳೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಈ ಅವಧಿಯಲ್ಲಿ ಮೆಟ್ರೋ ಸೇವೆಯು ಎಂ.ಜಿ. ರಸ್ತೆ ಮತ್ತು ಕಂಗೇರಿ ಮಟ್ರೋ ನಿಲ್ದಾಣಗಳ ನಡುವೆ ಮಾತ್ರ ಸೇವೆ ಲಭ್ಯವಿರುತ್ತದೆ.
ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 8.40 ಗಂಟೆಗೆ ಹೊರಡಲಿದೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಕಡೆಗೆ ರಾತ್ರಿ 9,10 ಗಂಟೆಗೆ ಹೊರಡುತ್ತದೆ. ಬೈಯಪ್ಪನಹಳ್ಳಿಗೆ ಕೊನೆಯ ರೈಲು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ರಾತ್ರಿ 9.10 ಗಂಟೆಗೆ ಹೊರಡುತ್ತದೆ. ನಾಳೆ ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 7.00 ಗಂಟೆಯಿಂದ ಮೆಟ್ರೋ ಸೇವೆ ಪುನರಾರಂಭಿಸಲಾಗುತ್ತದೆ. ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ.










