ಇಂದು ಪುನೀತ್ ರಾಜ್​ಕುಮಾರ್ ಪುಣ್ಯಸ್ಮರಣೆ : ಅಪ್ಪು ಸಮಾಧಿಗೆ ದೊಡ್ಮನೆ ಕುಟುಂಬಸ್ಥರಿಂದ ಪೂಜೆ…

63
firstsuddi

ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನಗಲಿ ಇಂದಿಗೆ ಒಂದು ವರ್ಷವಾಗಿದೆ. ಇಂದು ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ದೊಡ್ಮನೆ ಕುಟುಂಬಸ್ಥರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು.

ಅಶ್ವಿನಿ ಪುನೀತ್ ರಾಜ್​ಕುಮಾರ್, ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಭೋಜನಪ್ರಿಯ ಅಪ್ಪುಗೆ ಇಷ್ಟವಾದ ಖಾದ್ಯಗಳನ್ನು ಕುಟುಂಬಸ್ಥರು ಇಟ್ಟಿದ್ದರು. ಅಪ್ಪು ನೆನೆದು ಅಶ್ವಿನಿ ಭಾವುಕರಾದರು.

ಪುನೀತ್ ಅವರ ಪುಣ್ಯಸ್ಮರಣೆ ಹಿನ್ನೆಲೆ ರಾತ್ರಿಯಿಂದಲೇ ಅಪ್ಪು ಸಮಾಧಿ ಬಳಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಪ್ಪು ಸಮಾಧಿಗೆ ಜನಸಾಗರವೇ ಹರಿದುಬರುತ್ತಿದೆ. ಅಪ್ಪು ಸಮಾಧಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿದೆ. ಇಂದು ಅಪ್ಪು ಅಭಿಮಾನಿಗಳಿಗೆ ಸಮಾಧಿ ಬಳಿ ಅನ್ನದಾನದ ವ್ಯವಸ್ಥೆ ಕೂಡ ಮಾಡಲಾಗಿದೆ.

ಪುನೀತ್ ರಾಜ್ ಕುಮಾರ್ ಸಮಾಧಿ ಇರುವ ಕಂಠೀರವ ಸ್ಟುಡಿಯೋ ಹೊರಗೆ ಅಪ್ಪು ಅವರ ವಿಶೇಷವಾದ ಕಟೌಟ್ ಗಳನ್ನ ಹಾಕಲಾಗಿದೆ. ಪುನೀತ್ ಅಭಿನಯದ ಸಿನಿಮಾಗಳ ಕಟೌಟ್ ಜೊತೆಯಲ್ಲಿ ಡಾ. ರಾಜ್ ಕುಮಾರ್ ಹಾಗೂ ಪಾರ್ವತಮ್ಮ ಅವರ ಕಟೌಟ್ ಗಳನ್ನೂ ಹಾಕುವ ಮೂಲಕ ಅಭಿಮಾನ ಮೆರೆಯಲಾಗಿದೆ.