ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ- ಸಂಚಾರ ಮಾರ್ಗ ಬದಲಾವಣೆ ಮಾಹಿತಿ ಇಲ್ಲಿದೆ…

41
firstsuddi

ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಅದರಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ ಬಿಗಿ ಪೊಲೀಸ್ ಬಂದೂಬಸ್ತ್ ಮಾಡಲಾಗಿದೆ.

ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್, ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು, ಮೇಕ್ರಿ ಸರ್ಕಲ್‌ನಲ್ಲಿ ಚೊಂಬು ಪ್ರದರ್ಶಿಸಿ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ಹಿನ್ನೆಲೆ ಸರ್ಕಲ್ನಲ್ಲಿ ಹೆಚ್ಚುವರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೇಕ್ರಿ ಸರ್ಕಲ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಅವಕಾಶವಿಲ್ಲ. ಒಂದು ವೇಳೆ ಪ್ರತಿಭಟನೆ ನಡೆಸಲು ಮುಂದಾದ್ರೆ ಕೂಡಲೇ ವಶಕ್ಕೆ ಪಡೆದು ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ.

ಸಮಾವೇಶದ ನಂತರ ರಸ್ತೆ ಮಾರ್ಗವಾಗಿ ಹೆಚ್.ಎ .ಎಲ್. ತಲುಪಲಿರುವ ಮೋದಿಗೆ ಹೆಚ್.ಎ.ಎಲ್ ಮಾರ್ಗದಲ್ಲೂ ಕೂಡ ಹೆಜ್ಜೆ ಹಜ್ಜೆಗೆ ಪೊಲೀಸರ ನಿಯೋಜನೆಗೊಳ್ಳಲಿದ್ದಾರೆ. ಇದೇ ವೇಳೆ, ವಾಹನ ಸವಾರರಿಗೆ ಅಡಚಣೆಯಾಗದಂತೆ ಸಂಚಾರಿ ಪೊಲೀಸರಿಂದ ಕ್ರಮ ಜರುಗಿಸಿದ್ದು, ವಾಹನ ಸವಾರರು ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ. ಇಂದು ಮಧ್ಯಾಹ್ನ ಒಂದು ಗಂಟೆಯಿಂದ ಸಂಜೆ ಏಳು ಗಂಟೆಯವರೆಗೆ ಹಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ.

ಪ್ಯಾಲೇಸ್ ರಸ್ತೆ, ಜಯಮಹಲ್, ರಮಣಮಹರ್ಷಿ ರಸ್ತೆ, ಮೌಂಟ್ ಕಾರ್ಮೆಲ್ ರಸ್ತೆ, ಜಯರಾಮ್ ರಸ್ತೆ, ಸಿ ವಿ ರಾಮನ್ ರಸ್ತೆ, ನಂದಿದುರ್ಗ ರಸ್ತೆ, ಮೇಕ್ರಿ ಸರ್ಕಲ್, ವಸಂತನಗರ, ಬಳ್ಳಾರಿ ರಸ್ತೆ ಮತ್ತು ತರಳಬಾಳು ರಸ್ತೆ ಬದಲಿಗೆ ಪರ್ಯಾಯ ಮಾರ್ಗ ಬಳಸಲು ಸೂಚಿಸಲಾಗಿದೆ. ಸರಕು ಸಾಗಣೆ ವಾಹನಗಳ ಸಂಚಾರ ನಿಷೇಧವಿದ್ದು, ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸರಕು ಸಾಗಣೆ ವಾಹನಗಳಕ್ಕೆ ನಿರ್ಬಂಧ ಹೇರಲಾಗಿದೆ. ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಲಾಗಿದೆ. ಸಿಎಂಐಟಿ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಬಿಹೆಚ್ಇಎಲ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಜಂಕ್ಷನ್ ಮೂಲಕ ಸಂಚರಿಸಲು ಸೂಚನೆ ನೀಡಲಾಗಿದೆ.

ಬೆಂಗಳೂರಿನ ಅರಮನೆ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಮೊದಲು ಚಿಕ್ಕಬಳ್ಳಾಪುರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಅಲ್ಲಿಯೂ ಸಹ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.