ಇಂದು ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು.

61
firstsuddi

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರಿಗೆ ಆಗಮಿಸಲಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇಂದು ಮಧ್ಯಾಹ್ನ 12.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿನಿ ಬಳಿಕ ಹೆಲಿಕಾಪ್ಟರ್ ಮೂಲಕ ತಮಿಳುನಾಡಿನ ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿಗ ದಂಪತಿ, ಮಾವುತರ ಜೊತೆ ರಾಷ್ಟಪತಿ ದ್ರೌಪದಿ ಮುರ್ಮು ಸಂವಾದ ನಡೆಸಲಿದ್ದಾರೆ.

ಬಳಿಕ 5:45ರ ಸುಮಾರಿಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮೈಸೂರು ಜಿಲ್ಲಾಡಳಿತ ರಾಷ್ಟ್ರಪತಿ ಮುರ್ಮು ಅವರ ಸ್ವಾಗತ ಕೋರಲು ಸಿದ್ಧತೆ ಮಾಡಿಕೊಂಡಿದೆ.