ಇಂದು ರಾಜ್ಯಸಭಾ ಚುನಾವಣೆ : ಯಾರ ಪಾಲಾಗಲಿದೆ ನಾಲ್ಕನೇ ಸ್ಥಾನ?

69
firstsuddi

ಬೆಂಗಳೂರು : ರಾಜ್ಯಸಭೆ ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 15 ರಾಜ್ಯಗಳ 57 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇಂದೇ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ ಆರು ಅಭ್ಯರ್ಥಿಗಳು ಅಖಾಡದಲ್ಲಿದ್ದು, ಮೂವರು ಅಭ್ಯರ್ಥಿಗಳು ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ. ಇನ್ನೂ ನಾಲ್ಕನೇ ಸ್ಥಾನ ಯಾರ ಪಾಲಾಗುತ್ತೆ ಎಂದು ಎಲ್ಲ ಪಕ್ಷದವರು ಕಾತುರದಿಂದ ಕಾಯುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಜಿದ್ದಿಗೆ ಬಿದ್ದಿರುವ ಕಾರಣ ಎರಡೂ ಪಕ್ಷಗಳ ನಡುವೆ ಈವರೆಗೂ ಯಾವುದೇ ಒಪ್ಪಂದ ಏರ್ಪಟ್ಟಿಲ್ಲ. ಅಡ್ಡಮತದಾನದ ಭೀತಿಯೂ ಕಾಡುತ್ತಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನಕ್ಕೆ ವ್ಯವಸ್ಥೆ ಕೈಗೊಳ್ಳಲಾಗಿದೆ.

ಬಿಜೆಪಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್, ಕಾಂಗ್ರೆಸ್ನಿಂದ ಜೈರಾಂ ರಮೇಶ್ ಗೆಲ್ಲುವುದು ಖಚಿತ. ಇನ್ನು ನಾಲ್ಕನೇ ಸ್ಥಾನಕ್ಕೆ ಬಿಜೆಪಿಯಿಂದ ಲೇಹರ್ ಸಿಂಗ್ ಸಿರೋಯಾ, ಕಾಂಗ್ರೆಸ್ ನಿಂದ ಮನ್ಸೂರ್ ಖಾನ್ ಮತ್ತು ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. ಈ ಮೂವರಲ್ಲಿ ಯಾರಿಗೆ ಜಯ ಸಿಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.