ನವದೆಹಲಿ : ಲೋಕಸಭಾ ಚುನಾವಣೆಯ ಈಗಾಗಲೇ 4 ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇಂದು 5ನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 7 ರಾಜ್ಯಗಳ 51 ಕ್ಷೇತ್ರದಲ್ಲಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಉತ್ತರ ಪ್ರದೇಶದ 14, ರಾಜಸ್ಥಾನದ 12, ಪಶ್ಚಿಮ ಬಂಗಾಳ ಹಾಗೂ ಮಧ್ಯಪ್ರದೇಶದಲ್ಲಿ 7, ಬಿಹಾರ 5, ಝಾರ್ಖಂಡ್ 4 ಹಾಗೂ ಜಮ್ಮು ಕಾಶ್ಮೀರದ 2 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಹಾಗೂ ಸಮೃತಿ ಇರಾನಿ ಸೇರಿದಂತೆ 674 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ ಎಂದು ತಿಳಿದು ಬಂದಿದೆ.










