ನವದೆಹಲಿ : ರಷ್ಯಾ-ಉಕ್ರೇನ್ ಯುದ್ಧ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಇಂದು ಕ್ವಾಡ್ ರಾಷ್ಟ್ರ ನಾಯಕರು ವರ್ಚುಯಲ್ ಸಭೆ ನಡೆಸಲಿದ್ದಾರೆ.
ಕ್ವಾಡ್ ನಾಯಕರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್, ಆಸ್ಟ್ರೇಲಿಯನ್ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಪಾಲ್ಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಇಂದಿನ ವರ್ಚ್ಯುವಲ್ ಶೃಂಗಸಭೆಯಲ್ಲಿ ಇಂಡೋ-ಪೆಸಿಫಿಕ್ ಬೆಳವಣಿಗೆಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ನಡೆಯುತ್ತಿರುವ ಕ್ವಾಡ್ ನಾಯಕರ ವರ್ಚುಯಲ್ ಸಭೆ ಮಹತ್ವ ಪಡೆದುಕೊಂಡಿದೆ.










