ಇಂದು ಸಂಜೆಯಿಂದ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ.

28

ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ಮತ್ತು ಆಚರಿಸಲು ಭರ್ಜರಿ ಸಿದ್ಧತೆ ಶುರುವಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈ ಸಂಬಂಧ ಆಯಾ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಇದರ ಜೊತೆಗೆ ಕೆಲವು ಪ್ರವಾಸಿತಾಣಗಳಿಗೆ ನಿರ್ಬಂಧ.ಹೇರಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಸಿದ್ದರಬೆಟ್ಟ, ಶಿವಗಂಗೆ ಬೆಟ್ಟ, ಮಾಕಳಿದುರ್ಗ, ನಂದಿಬೆಟ್ಟ ಮತ್ತು ಆವತಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇಂದು ಸಂಜೆ 6 ಗಂಟೆಯಿಂದ ನಾಳೆ ಬೆಳಗ್ಗೆ 7 ಗಂಟೆಯವರೆಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಆದೇಶಿಸಿದ್ದಾರೆ. ಹೊಸ ವರ್ಷಾಚರಣೆ ಹಿನ್ನಲೆ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವ ಸಾರ್ವಜನಿಕರು ಮೋಜು ಮಸ್ತಿ ಮಾಡುವ ಮೂಲಕ ಕಾನೂನು ವ್ಯವಸ್ಥೆಗೆ ಭಂಗ ತರುವ ಕಾರಣಕ್ಕೆ ಡಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ನಲ್ಲಿ ಇಂದು ಸಂಜೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ತಿಳಿಸಿದ್ದಾರೆ. ಜಿಲ್ಲಾ ಪೆÇಲೀಸ್ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಿದ್ಧ ಪ್ರವಾಸಿ ಕೇಂದ್ರಗಳಾದ ಮುಳ್ಳಯ್ಯನಗಿರಿ, ದೇವರಮನೆ, ದತ್ತಪೀಠ, ಝರಿಫಾಲ್ಸ್ ಸೇರಿದಂತೆ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ. ಹೋಂ ಸ್ಟೇ, ರೆಸಾರ್ಟ್, ರೆಸ್ಟೋರೆಂಟ್ ಮಾಲೀಕರ ಸಭೆಯನ್ನು ನಡೆಸಿ ಎಚ್ಚರಿಕೆ ನೀಡಲಾಗಿದೆ. ನ್ಯಾಯಾಲಯದ ಆದೇಶದಂತೆ ರಾತ್ರಿ 10 ಗಂಟೆ ನಂತರ ಸಾರ್ವಜನಿಕವಾಗಿ ಸೌಂಡ್‍ಸಿಸ್ಟಮ್ ಬಳಕೆ ಮಾಡುವಂತಿಲ್ಲ. ಪಟಾಕಿ ಹೊಡೆಯುವಂತಿಲ್ಲ ಎಂದು ತಿಳಿಸಿದ್ದಾರೆ.