ಇಂದು ಸಂಜೆ ಕೇಂದ್ರ ಸಂಪುಟ ಪುನರ್ ರಚನೆ : ಶೋಭಾ ಕರಂದ್ಲಾಜೆಗೂ ಅವಕಾಶ?

66
firstsuddi

ನವದೆಹಲಿ : ಇಂದು ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ನಡೆಯಲಿದ್ದು, ಸಂಜೆ ಆರು ಗಂಟೆಗೆ ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್ ಆಗಿದೆ. ಸದ್ಯ ಕೇಂದ್ರ ಸಂಪುಟದಲ್ಲಿರುವ ಡಿ.ವಿ.ಸದಾನಂದ ಗೌಡರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸ್ಥಾನವನ್ನು ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆಗೆ ನೀಡಲಾಗ್ತಿದೆ ಎಂದು ಹೇಳಲಾಗ್ತಿದೆ.

ಮತ್ತೊಂದೆಡೆ ಸಂಪುಟ ಪುನರ್ ರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಹಾಗೂ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ರಾಜೀನಾಮೆ ನೀಡಿದ್ದಾರೆ. ಇನ್ನೂ 3-4 ಸಚಿವರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಕ್ಯಾಬಿನೆಟ್ ಪುನರಾಚನೆಗೆ ಸ್ವಲ್ಪ ಮುಂಚಿತವಾಗಿ ಅವರನ್ನು ಮೋದಿ ಸಂಪುಟದಿಂದ ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಂತೋಷ್ ಗಂಗ್ವಾರ್ ತಾವು ರಾಜೀನಾಮೆ ನೀಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಹಣಕಾಸು ಖಾತೆ ರಾಜ್ಯ ಸಚಿವರಾಗಿರುವ ಅನುರಾಗ್ ಠಾಕೂರ್ ಸೇರಿದಂತೆ ಮೂವರಿಗೆ ಸಂಪುಟ ದರ್ಜೆಗೆ ಬಡ್ತಿ ನೀಡಲಾಗುತ್ತದೆ. ಶೋಭಾ ಕರಂದ್ಲಾಜೆ, ಮೀನಾಕ್ಷಿ ಲೇಖಿ, ಅನುಪ್ರಿಯಾ ಪಟೇಲ್ ಸೇರಿದಂತೆ ಐವರು ಮಹಿಳೆಯರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.