ಬೆಂಳೂರು : ದೇವನಹಳ್ಳಿ ಸಮೀಪದ ಖಾಸಗಿ ರೆಸಾರ್ಟ್ ನಲ್ಲಿ ಇಂದು ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ದೇವೇಗೌಡರ ಹುಟ್ಟುಹಬ್ಬ ಆಚರಣೆ ಮಾಡಲಿದ್ದಾರೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮೊದಲಾದವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯಸಭೆ, ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪಂಚರತ್ನ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ವಿಧಾನಸಭೆಯಲ್ಲಿ 32 ಜೆಡಿಎಸ್ ಶಾಸಕರಿದ್ದು, ವಿಧಾನಪರಿಷತ್ ನ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ. ಆದರೆ ರಾಜ್ಯಸಭೆಯ ಒಂದು ಸ್ಥಾನ ಗೆಲ್ಲಲು ಕಾಂಗ್ರೆಸ್ ಅಥವಾ ಬಿಜೆಪಿಯ ನೆರವು ಪಡೆಯಬೇಕಾಗುತ್ತದೆ. ಎರಡೂ ರಾಷ್ಟ್ರೀಯ ಪಕ್ಷಗಳು ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಪಕ್ಷದ ಅಭ್ಯರ್ಥಿ ಆಯ್ಕೆಗೆ ಯಾವ ಕಾರ್ಯತಂತ್ರ ಅನುಸರಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ.










