ಇಂದು ಸಂಜೆ 4 ಗಂಟೆಗೆ ದ್ವಿತೀಯ ಪಿಯುಸಿ ಪಲಿತಾಂಶ ಪ್ರಕಟ…

122
firstsuddi

ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಇಂದು ಸಂಜೆ 4 ಗಂಟೆಗೆ ಪ್ರಕಟವಾಗಲಿದ್ದು, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪಿಯುಸಿ ಬೋರ್ಡ್ ನಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ನಂತರ ಸಂಜೆ 5 ಗಂಟೆಗೆ ಇಲಾಖೆ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಕೊರೊನಾ ಹಿನ್ನೆಲೆ ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದೇ ಎಲ್ಲಾ ವಿದ್ಯಾರ್ಥಿಗಳನ್ನ ಪಾಸ್ ಮಾಡಲಾಗಿತ್ತು.
ಗ್ರೇಡ್ ಬದಲಿಗೆ ಅಂಕಗಳ ಮಾದರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಯು ಎಸ್ ಎಸ್ ಎಲ್ ಸಿಯಲ್ಲಿ ಪಡೆದ ಅಂಕಗಳಲ್ಲಿ ಶೇ.45 ಅಂಕ, ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳಲ್ಲಿ ಶೇ.45 ಅಂಕ ಹಾಗೂ ಶೇ.10 ಅಂಕ ಇಂಟರ್ನಲ್ ಅಸೆಸ್ಮೆಂಟ್ ಅಂಕಗಳನ್ನು ಸೇರಿಸಿ ಫಲಿತಾಂಶ ನೀಡಲಾಗ್ತಿದೆ. ಒಂದು ವೇಳೆ ಫಲಿತಾಂಶದ ಬಗ್ಗೆ ಆಕ್ಷೇಪ ಇರೋ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ವಿದ್ಯಾರ್ಥಿಗಳು https://karresults.nic.in/ ಈ ಲಿಂಕ್ ನ ಮೂಲಕ ದ್ವಿತೀಯ ಪಿಯುಸಿ ಪಲಿತಾಂಶವನ್ನು ಪಡೆಯಬಹುದಾಗಿದೆ.