ಇಂದು ಹೊರಬೀಳಲಿದೆ ವಿಧಾನ ಪರಿಷತ್ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದೆ ಅದೃಷ್ಟ?

94
firstsuddi

ಬೆಂಗಳೂರು : ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ಪ್ರಾರಂಭವಾಗಿದೆ. ಈಗಾಗಲೇ ಮತ ಎಣಿಕೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮಧ್ಯಾಹ್ನ ಹೊತ್ತಿಗೆ 90 ಅಭ್ಯರ್ಥಿಗಳ ಭವಿಷ್ಯ ಬಹುತೇಕ ಖಚಿತವಾಗಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ ತಲಾ 20 ಕ್ಷೇತ್ರಗಳಲ್ಲಿ ಮತ್ತು ಜೆಡಿಎಸ್ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತು. ರಾಜ್ಯದ 25 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆದಿತ್ತು.

ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಕೋಲಾರ, ಬೀದರ್, ಕಲಬುರಗಿ, ಬಿಜಾಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಕೊಡಗು, ಮೈಸೂರು ಕೇಂದ್ರಗಳಲ್ಲಿ ಮತ ಎಣಿಕೆ ಶುರುವಾಗಿದೆ.