ನವದೆಹಲಿ : ಇಂದೂ ಕೂಡ ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದ್ದು, ಗ್ರಾಹಕರಿಗೆ ಜೇಬಿಗೆ ಕತ್ತರಿ ಬಿದ್ದಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಲೀಟರ್ ಗೆ ತಲಾ 80 ಪೈಸೆ ಹೆಚ್ಚಳವಾಗಿದೆ.
ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 80 ಪೈಸೆ ಹೆಚ್ಚಳದ ಮೂಲಕ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 98.61 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ 89.87 ದಾಖಲಾಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯಲ್ಲಿ 85 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀ.ಪೆಟ್ರೋಲ್ ದರ 113.35, ಡೀಸೆಲ್ 97.55 ದಾಖಲಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 104.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.47 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 103.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.14 ರೂಪಾಯಿ ದಾಖಲಾಗಿದೆ.










