ಇಂದೋರ್ ತಲುಪುತ್ತಿದ್ದಂತೆ ಬಾಂಬ್ ಸ್ಫೋಟಿಸುವುದಾಗಿ ರಾಹುಲ್ ಗಾಂಧಿಗೆ ಬೆದರಿಕೆ…

61
firstsuddi

ಭೋಪಾಲ್ : ಮಧ್ಯಪ್ರದೇಶದ ಇಂದೋರ್ ತಲುಪುತ್ತಿದ್ದಂತೆ ಬಾಂಬ್ ಸ್ಫೋಟಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬೆದರಿಕೆಯೊಡ್ಡಲಾಗಿದೆ.

ಜುನಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದೋರ್ ನ ಸಿಹಿತಿಂಡಿ ಅಂಗಡಿಯೊಂದರಲ್ಲಿ ಬೆದರಿಕೆ ಪತ್ರ ಸಿಕ್ಕಿದ್ದು, ಪತ್ರದಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದೋರ್ ಗೆ ಆಗಮಿಸಲಿದ್ದು, ಈ ವೇಳೆ ಇಲ್ಲಿ ಬಾಂಬ್ ಸಿಡಿಸಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮೂಲಗಳ ಪ್ರಕಾರ, ಪೊಲೀಸರು ಜೂನಿ ಇಂದೋರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ ಮತ್ತು ಪತ್ರವನ್ನು ಸಿಹಿತಿಂಡಿ ಅಂಗಡಿಯ ಹೊರಗೆ ಬಿಟ್ಟುಹೋದ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 507 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ರಾಹುಲ್ ಗಾಂಧಿ ಅವರು ವೀರ್ ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಒಂದು ದಿನದ ನಂತರ ಈ ಬೆದರಿಕೆ ಪತ್ರ ಬಂದಿದೆ.