ಇಂದ್ರಜಿತ್ ಲಂಕೇಶ್ ಅವರ ಮನವಿಯಂತೆ ತನಿಖೆಗೆ ಸೂಚನೆ : ಬಸವರಾಜ್ ಬೊಮ್ಮಾಯಿ.

87
firstsuddi

ಬೆಂಗಳೂರು : ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರ ಮನವಿಯಂತೆ ತನಿಖೆಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ಅವರು ನನಗೆ ಮನವಿ ಪತ್ರ ನೀಡಿದ್ದಾರೆ. ಆ ಮನವಿ ಪತ್ರದ ಆಧಾರದ ಮೇಲೆ ತನಿಖೆ ನಡೆಸುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಇಂದ್ರಜಿತ್ ಅವರ ಆರೋಪದ ಬಗ್ಗೆ ನನಗೆ ಮಾಹಿತಿ ಇಲ್ಲ. ಮನವಿ ಪತ್ರದಲ್ಲಿ ಸ್ಪಷ್ಟವಾಗಿ ಏನೂ ಹೇಳಿಲ್ಲ. ಯಾವುದೇ ಸಾಕ್ಷಿಗಳನ್ನು ಅವರು ನಮಗೆ ನೀಡಿಲ್ಲ. ಅವರ ಮನವಿ ಪತ್ರದ ಮೇಲೆ ತನಿಖೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.