ಇಡಿ ದಾಳಿ ಬಳಿಕ ಮೊದಲ ಬಾರಿ ವಿಚಾರಣೆಗೆ ಹಾಜರಾದ ಜಮೀರ್ ಅಹ್ಮದ್.

73
firstsuddi

ನವದೆಹಲಿ : ಇಡಿ ದಾಳಿ ಬಳಿಕ ಮೊದಲ ಬಾರಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದೆಹಲಿಯ ಲೋಕನಾಯಕ್ ಭವನದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಇಂದು ವಿಚಾರಣೆಗೆ ಹಾಜರಾದರು. ವಿಚಾರಣೆಯಲ್ಲಿ ಜಮೀರ್ ಅಹ್ಮದ್ ಭೂಮಿ ಖರೀದಿ, ಮನೆ ನಿರ್ಮಾಣ ಮತ್ತು ಸಾರಿಗೆ ವ್ಯವಹಾರಗಳ ಹೆಚ್ಚುವರಿ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವಿಚಾರಣೆ ಬಳಿಕ ಮಾತನಾಡಿದ ಜಮೀರ್ ಅಹ್ಮದ್ ಖಾನ್, ಇ.ಡಿ. ಅಧಿಕಾರಿಗಳು ದೂರವಾಣಿ ಕರೆ ಮಾಡಿ ಬರುವುದಕ್ಕೆ ಹೇಳಿದ್ದರು, ಬಂದಿದ್ದೇನೆ. ಈ ಹಿಂದೆ ಹೇಳಿಕೆ ದಾಖಲಿಸಿದ್ದೆ, ಅಗತ್ಯ ದಾಖಲೆ ನೀಡಿದ್ದೆ. ಕೆಲ ವಿಚಾರಗಳ ಬಗ್ಗೆ ಸ್ಪಷ್ಟನೆ ನೀಡಲು ವಿಚಾರಣೆಗೆ ಬಂದಿದ್ದೇನೆ. ಐಎಂಎ ಪ್ರಕರಣಕ್ಕೂ ಇವತ್ತಿನ ವಿಚಾರಣೆಗೂ ಯಾವುದೇ ಸಂಬಂಧ ಇಲ್ಲ. ಅವಶ್ಯವಿದ್ದರೆ ಮತ್ತೆ ವಿಚಾರಣೆಗೆ ಕರೆಯುವುದಾಗೆ ಹೇಳಿದ್ದಾರೆ. ಇಡಿ ಅಧಿಕಾರಿಗಳು ನಡೆಸಿದ ವಿಚಾರಣೆ ಕುರಿತು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.

ಆಗಸ್ಟ್ 5ರಂದು ಬೆಂಗಳೂರಿನಲ್ಲಿರುವ ಜಮೀರ್ ಅಹ್ಮದ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.