ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ…

44
firstsuddi

ಬೀದರ್ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಹಳ್ಳಿ ತಾಂಡಾದಲ್ಲಿ ನಡೆದಿದೆ.

ತಾಯಿ ಮೀರಾಬಾಯಿ(25) ಪುತ್ರಿಯರಾದ ನಚ್ಚುಬಾಯಿ(3), ಗೋಲುಬಾಯಿ(2) ಅವರಿಗೆ ವಿಷವುಣಿಸಿ ತಾನು ಕೂಡ ನೇಣಿಗೆ ಶರಣಾಗಿದ್ದಾಳೆ. ಮೀರಾಬಾಯಿ ಹಲವು ದಿನಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಳು. ಜೊತೆಗೆ ಕೌಟುಂಬಿಕ ಕಲಹ ಹಿನ್ನೆಲೆ ಮಕ್ಕಳನ್ನು ಹತ್ಯೆ ಮಾಡಿದ್ದಾಳೆ.

ಸ್ಥಳಕ್ಕೆ ಧನ್ನೂರಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.