ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ…

79
firstsuddi

ವಿಜಯಪುರ : ಕೌಟುಂಬಿಕ ಕಲಹ ಹಿನ್ನೆಲೆ ಮಹಿಳೆಯೊಬ್ಬಳು ತನ್ನಿಬ್ಬರ ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದಿದೆ.

ರೇಣುಕಾ ಅಮೀನಪ್ಪ ಕೋನಿನ್(26), ಯಲ್ಲವ್ವ(2), ಅಮೃತಾ(1) ಮೃತ ದುರ್ದೈವಿಗಳು. ರೇಣುಕಾ 2 ದಿನದ ಹಿಂದೆ ಪತಿ ಮನೆಯಲ್ಲಿ ಜಗಳವಾಡಿಕೊಂಡು ಮನೆ ಬಿಟ್ಟು ಬಂದಿದ್ದರು. ಹೀಗಾಗಿ ಗಂಡನ ಮನೆಯವರು ರೇಣುಕಾ ಮತ್ತು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು.

ಎಲ್ಲೂ ಸಿಗದ ಹಿನ್ನೆಲೆ ಅಮೀನಪ್ಪ ಕೋನಿನ್ ಸೋಮವಾರ ಮನಗೂಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇಂದು ಮುಳವಾಡ ಏತ ನೀರಾವರಿ ಕಾಲುವೆಯಲ್ಲಿ ರೇಣುಕಾ, ಓರ್ವ ಹೆಣ್ಣು ಮಗಳ ಶವ ಪತ್ತೆಯಾಗಿದೆ. ಮತ್ತೋರ್ವ ಹೆಣ್ಣು ಮಗುವಿನ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.