ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ…

69
firstsuddi

ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಿನ್ನೆ ರಾತ್ರಿ ಕಾಡುಗೋಡಿ ನಗರದ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.

1 ಹಾಗೂ 3 ವರ್ಷದ ಎರಡು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ಆಂಧ್ರ ಮೂಲದ ದಂಪತಿ ವಿಜಯ್(31), ಪತ್ನಿ ಹೇಮಾವತಿ(29) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.