ಬೆಂಗಳೂರು : ಇಬ್ಬರು ಹೆಣ್ಣುಮಕ್ಕಳ ಎದುರೇ ತಂದೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ವೀರ್ ಸಾಗರ್ ರಸ್ತೆಯಲ್ಲಿ ನಡೆದಿದೆ.
ದೀಪಕ್ ಕುಮಾರ್ ಸಿಂಗ್ (46) ಕೊಲೆಯಾದ ವ್ಯಕ್ತಿ. ಮೂಲತಃ ಬಿಹಾರದವರಾಗಿದ್ದ ದೀಪಕ್ ಕುಮಾರ್ ಸಿಂಗ್ ಜಿಕೆವಿಕೆನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಯಲಹಂಕ ನ್ಯೂ ಟೌನ್ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇತ್ತೀಚೆಗೆ ಮೃತರ ಪತ್ನಿ ಬಿಹಾರದ ತವರು ಮನೆಗೆ ತೆರಳಿದ್ದಳು. ದೀಪಕ್ ಕುಮಾರ್ ಸಿಂಗ್ ಇಬ್ಬರು ಹೆಣ್ಣು ಮಕ್ಕಳ ಜೊತೆ ವಾಸವಿದ್ದರು.
ನಿನ್ನೆ ತಡರಾತ್ರಿ 1.30ರ ಸುಮಾರಿಗೆ ಏಕಾಏಕಿ ಮನೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ದೀಪಕ್ ತಲೆಗೆ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.










