ಚಿಕ್ಕಬಳ್ಳಾಪುರ : ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಸಜ್ಜುವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತ ಮಕ್ಕಳ ಗುರುತು ಪತ್ತೆಯಾಗಿಲ್ಲ. ಬಾಗೇಪಲ್ಲಿ ತಾಲ್ಲೂಕಿನ ಉದವಾರಪಲ್ಲಿ ಗ್ರಾಮದ ನಾಲ್ಕು ಮಕ್ಕಳು ಸಜ್ಜುವಾರಪಲ್ಲಿ ಗ್ರಾಮದ ಬಳಿ ಇರುವ ಕುಂಟೆಯಲ್ಲಿ ಈಜಲು ತೆರಳಿದ್ದು, ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಓರ್ವ ಬಾಲಕನ ಮೃತದೇಹವನ್ನು ಹೊರತೆಗೆದಿದ್ದು, ಇನ್ನೂ ಮೂವರ ಮೃತದೇಹಕ್ಕಾಗಿ ಶೊಧಕಾರ್ಯ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಚೇಳೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.










