ಈಜು ಸ್ಪರ್ಧಿ ನಿರಂಜನ್ ಮುಕುಂದನ್ ಅವರಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ…

283
firstsuddi

ಬೆಂಗಳೂರು : ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಗಳಿಸಿ ಕರ್ನಾಟಕಕ್ಕೆ ಕೀರ್ತಿ ತಂದ ವಿಕಲಚೇತನರಾದ ನಿರಂಜನ್ ಮುಕುಂದನ್ ಅವರಿಗೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಕಳೆದ ತಿಂಗಳು ಬ್ರೆಜಿಲ್‍ನಲ್ಲಿ ನಡೆದ ಅಂತರರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಗಳಿಸಿ ಕರ್ನಾಟಕಕ್ಕೆ ಕೀರ್ತಿ ತಂದ ನಿರಂಜನ್ ಮುಕುಂದನ್ ಅವರಿಗೆ ಅಭಿನಂದನೆಗಳು. ವಿಕಲಚೇತನನಾಗಿ ಜನಿಸಿ ಹಲವು ಶಸ್ತ್ರಚಿಕಿತ್ಸೆಗೆ ಒಳಗಾದರೂ ಎದೆಗುಂದದೆ ಸಾಧನೆ ಮಾಡಿದ ನಿರಂಜನ್ ಮುಕುಂದನ್ ಅವರು ಎಲ್ಲರಿಗೂ ಆದರ್ಶವಾಗಲಿ ಎಂದು ಟ್ವೀಟ್ ಮಾಡಿದ್ದಾರೆ.