ನವದೆಹಲಿ : ಈಡೇರಿಸಲು ಸಾಧ್ಯವಿಲ್ಲದ ಭರವಸೆಗಳನ್ನು ಸಾರ್ವಜನಿಕವಾಗಿ ಘೋಷಣೆ ಮಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಂಪುಟದ ಸಚಿವರಿಗೆ ಸೂಚನೆ ನೀಡಿದ್ದಾರೆ. ಸಚಿವರು ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ವ್ಯಾಪ್ತಿಗೆ ಬರದೆ ಇರುವ ವಿಷಯಗಳ ಬಗ್ಗೆ ಹೇಳಿಕೆ ನೀಡುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರು ಈಡೇರಿಸಲಾಗದ ಭರವಸೆಯನ್ನು ಸಾರ್ವಜನಿಕವಾಗಿ ಘೋಷಣೆ ಮಾಡಬೇಡಿ. ಆರ್ಟಿಕಲ್ 370 ರದ್ದತಿ ನಂತರದಲ್ಲಿ ನೂತನ 2 ಕೇಂದ್ರಾಡಳಿತ ಪ್ರದೇಶವನ್ನು ಅಭಿವೃದ್ದಿ ಪಡಿಸುವಲ್ಲಿ ಎಲ್ಲಾ ಸಚಿವರು ಕಾರ್ಯಪ್ರವೃತ್ತರಾಗಬೇಕು. ಎಲ್ಲರೂ ತಮ್ಮ ಕ್ಷೇತ್ರವನ್ನು ಹೇಗೆ ಅಭಿವೃದ್ದಿ ಪಡಿಸಬೇಕು ಅಂದುಕೊಂಡಿದ್ದೀರೋ ಹಾಗೆಯೇ ಇದನ್ನು ನಿಮ್ಮ ಕ್ಷೇತ್ರ ಎಂದು ಭಾವಿಸಿ ಅಭಿವೃದ್ದಿ ಪಡಿಸಬೇಕು ಎಂದು ಮನವಿ ಮಾಡಿಕೊಂಡರು.










