ಬೆಂಗಳೂರು : ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ. ಆದರೆ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ನಿನ್ನೆ ಹೇಳಿದ್ದರು. ಜಮೀರ್ ಹೇಳಿಕೆಗೆ ಕಿಡಿಕಾರಿರುವ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಈದ್ಗಾ ಮೈದಾನ ನಿಮ್ಮ ಪಿತ್ರಾರ್ಜಿತ ಆಸ್ತಿಯಲ್ಲ. ಅಲ್ಲಿ ಗಣೇಶೋತ್ಸವ ಮಾಡೇ ತೀರ್ತಿವಿ. ತಾಕತ್ತಿದ್ದರೆ ತಡೆಯಿರಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಈದ್ಗಾ ಮೈದಾನ ಯಾರ ಆಸ್ತಿ ಎಂಬ ವಿಚಾರದ ಚರ್ಚೆ ಮುನ್ನೆಲೆಗೆ ಬಂದ ಬೆನ್ನಲ್ಲೇ ಕಳೆದ ತಿಂಗಳು ಬಿಬಿಎಂಪಿ ಈದ್ಗಾ ಮೈದಾನ ನಿಮ್ಮ ಆಸ್ತಿ ಎಂದು ಸಾಬೀತು ಪಡಿಸಲು ದಾಖಲೆ ನೀಡುವಂತೆ ವಕ್ಫ್ ಬೋರ್ಡ್ ಗೆ ಸೂಚಿಸಿತ್ತು. ಆದರೆ ವಕ್ಫ್ ಬೋರ್ಡ್ ಕಡೆಯಿಂದ ಸರಿಯಾದ ದಾಖಲೆಗಳು ಸಲ್ಲಿಕೆಯಾಗಿರಲಿಲ್ಲ. ಹೀಗಾಗಿ ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ ಎಂದು ಜಂಟಿ ಆಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದರು.
ಬಿಬಿಎಂಪಿಯಿ ಈ ಮಹತ್ವದ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಮುಸ್ಲಿಮರಿಗೆ ಮಾತ್ರ ಪ್ರಾರ್ಥನೆಗೆ ಅವಕಾಶ ಯಾಕೆ ಈ ಜಾಗದಲ್ಲಿ ಅವಕಾಶ ಹಿಂದೂಗಳಿಗೆ ಕೊಡಿ, ನಾವು ಗಣೇಶೋತ್ಸವ ಆಚರಿಸುತ್ತೇವೆ ಎಂದು ವಾದವನ್ನು ಮುಂದಿಟ್ಟಿವೆ.










