ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅನುಮತಿ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಕ್ಫ್ ಬೋರ್ಡ್.

43
firstsuddi

ನವದೆಹಲಿ : ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಇಂದು ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಪೀಠದ ಮುಂದೆ ಮುಸ್ಲಿಂ ಬೋರ್ಡ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಿ ವಾದ ಮಂಡಿಸಿದರು. ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಅರ್ಜಿದಾರರ ಪರ ಮನವಿಯನ್ನು ಆಲಿಸಿದ ಕೋರ್ಟ್ ನಾಳೆ ಈ ಅರ್ಜಿಯ ವಿಚಾರಣೆ ನಡೆಸಲು ಒಪ್ಪಿಕೊಂಡಿತು.

ಚಾಮರಾಜಪೇಟೆ ಮೈದಾನದಲ್ಲಿ ಉತ್ಸವಕ್ಕೆ ಅನುಮತಿ ನೀಡಲು ಸರ್ಕಾರವು ತನ್ನದೇ ನಿರ್ಧಾರ ಕೈಗೊಳ್ಳಬಹುದು ಎಂದು ಹೈಕೋರ್ಟ್ ಆಚರಣೆಗೆ ಅನುಮತಿ ನೀಡಿತ್ತು. ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.