ಈಶ್ವರಪ್ಪನವರು ಹಿರಿಯ ಸಚಿವರು, ರಾಜ್ಯಪಾಲರಿಗೆ ಪತ್ರ ಬರೆದಿದ್ದು ಸರಿಯಲ್ಲ : ಅರುಣ್ ಸಿಂಗ್ ಅಸಮಾಧಾನ…

146
firstsuddi

ಬೆಂಗಳೂರು : ತಮ್ಮ ಇಲಾಖೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹಸ್ತಕ್ಷೇಪ ಆರೋಪಿಸಿ ಸಚಿವ ಕೆ.ಎಸ್.ಈಶ್ವರಪ್ಪನವರು ರಾಜ್ಯಪಾಲ ವಜುಭಾಯ್ ವಾಲಾ ಹಾಗೂ ಬಿಜೆಪಿ ಹೈಕಮಾಂಡ್ಗೆ ಪತ್ರದ ಮೂಲಕ ದೂರು ನೀಡಿದ್ದರು. ಇದಕ್ಕೆ ಪ್ರತಿಕ್ರಯಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಈಶ್ವರಪ್ಪನವರು ಹಿರಿಯ ಸಚಿವರು, ರಾಜ್ಯಪಾಲರಿಗೆ ಪತ್ರ ಬರೆದಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಈಶ್ವರಪ್ಪನವರು ಏಕಾಏಕಿ ಈ ರೀತಿ ರಾಜ್ಯಪಾಲರಿಗೆ ಪತ್ರ ಬರೆದಿರುವುದು ಸರಿಯಲ್ಲ. ಇದನ್ನು ಪಕ್ಷದ ನಾಯಕರ ಗಮನಕ್ಕೆ ತರಬಹುದಾಗಿತ್ತು. ಅಲ್ಲದೇ, ಸಚಿವ ಸಂಪುಟದಲ್ಲಿಯೂ ಇದರ ಬಗ್ಗೆ ಪ್ರಸ್ತಾಪ ಮಾಡುವ ಅವಕಾಶವಿತ್ತು. ಆದರೆ, ಇದೆಲ್ಲಾ ಬಿಟ್ಟು ಪತ್ರದ ಮೂಲಕ ರಾಜ್ಯಪಾಲರಿಗೆ ಹಾಗೂ ಹೈಕಮಾಂಡ್ ನಾಯಕರಿಗೆ ದೂರು ನೀಡಿದ್ದಾರೆ. ಸಂಪುಟ ಸದಸ್ಯರಾಗಿ ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವುದು ಸರಿಯಲ್ಲ ಎಂದರು. ಸದ್ಯ ಚುನಾವಣೆ ಮೇಲೆ ಗಮನ ಹರಿಸಿದ್ದೇವೆ. ಚುನಾವಣಾ ಮುಗಿದ ನಂತರವಷ್ಟೇ ಈಶ್ವರಪ್ಪ ಬರೆದ ಪತ್ರದ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಅರುಣ್ ಸಿಂಗ್ ಅವರು ತಿಳಿಸಿದ್ದಾರೆ.