ಈಶ್ವರಪ್ಪ ವಜಾಗೆ ಕಾಂಗ್ರೆಸ್ ಬಿಗಿ ಪಟ್ಟು – ವಿಧಾನಸಭೆ ಕಲಾಪವನ್ನು ಮಾರ್ಚ್ 4ಕ್ಕೆ ಮುಂದೂಡಿದ ಸ್ಪೀಕರ್.

61
firstsuddi

ಬೆಂಗಳೂರು : ವಿಧಾನಸಭೆ ಕಲಾಪ 5ದಿನ ವ್ಯರ್ಥ ಆಯಿತು. ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಇಂದು ಕೂಡ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಿದ್ದರಿಂದ ವಿಧಾನಸಭೆ ಕಲಾಪವನ್ನು ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ಮಾರ್ಚ್ 4ಕ್ಕೆ ಮುಂದೂಡಿದರು.

ಇಂದು ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಶಾಸಕರು, ರಾಷ್ಟ್ರಧ್ವಜ ವಿಚಾರದಲ್ಲಿ ಈಶ್ವರಪ್ಪ ಹೇಳಿಕೆ ಖಂಡಿಸಿ ಪ್ರತಿಭಟನೆ ಮುಂದುವರಿಸಿದರು. ಇದರಿಂದ ಗರಂ ಆದ ಸ್ಪೀಕರ್, ಈಗಾಗಲೇ 5 ದಿನ ಸದನದ ಸಮಯ ಹಾಳಾಗಿದೆ. ಪ್ರಶ್ನೋತ್ತರದಲ್ಲಿ ಭಾಗಿಯಾಗಿ, ಸದನದ ಸಮಯ ಹಾಳು ಮಾಡಬೇಡಿ ಎಂದರು.

ಕಾಂಗ್ರೆಸ್ ಸದಸ್ಯರ ತೀವ್ರ ಗದ್ದಲ, ಕೋಲಾಹಲ ನಡುವೆಯೇ ಪ್ರಶ್ನೋತ್ತರ ಕಲಾಪ, ಕರ್ನಾಟಕ ಸಚಿವರ ಸಂಬಳ ಭತ್ಯೆ, ನಿವೃತ್ತಿ ವೇತನ ತಿದ್ದುಪಡಿ ವಿಧೇಯಕ ಮಂಡಿಸಿ ಅಂಗೀಕರಿಸಲಾಯಿತು. ನಂತರ ಸಿಎಂ, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರ ನೀಡಿದರು. ಸ್ಪೀಕರ್ ಮತ್ತೊಮ್ಮೆ ಮನವಿ ಮಾಡಿದರೂ ಕಾಂಗ್ರೆಸ್ ಪ್ರತಿಭಟನೆ ಹಿಂಪಡೆಯದ ಹಿನ್ನೆಲೆಯಲ್ಲಿ ಸದನವನ್ನು ಮಾರ್ಚ್ 4ಕ್ಕೆ ಮುಂದೂಡಿದರು.