ಈ ವರ್ಷದಿಂದಲೇ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ : ಬಿ.ಸಿ.ನಾಗೇಶ್.

58
firstsuddi

ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಈ ವರ್ಷದಿಂದಲೇ ಭಗವದ್ಗೀತೆ ಬೋಧನೆಯನ್ನು ಮಾಡುವ ಚಿಂತನೆ ಮಾಡಲಾಗಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದರು.

ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಸದಸ್ಯ ಎಂ.ಕೆ. ಪ್ರಾಣೇಶ್ ಅವರು ಪ್ರಸ್ತಾಪಿಸಿದರು. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ?. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಶಿಕ್ಷಣ ಸಚಿವರು, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

ಇದೇ ವೇಳೆ ಬಾಬಾ ಬುಡನ್ ಗಿರಿ ಎಂಬ ಹೆಸರನ್ನು ದತ್ತಾತ್ರೇಯ ಪೀಠ ಎಂದು ಪಠ್ಯ ಪುಸ್ತಕದಲ್ಲಿ ಬದಲಾಯಿಸಬೇಕು, ಇತಿಹಾಸದ ಹೆಸರು ಮುಂದುವರೆಸಬೇಕು ಎನ್ನುವ ಪ್ರಸ್ತಾಪ ಇದೆ. ಇತಿಹಾಸದ ತಪ್ಪುಗಳನ್ನು ಪಠ್ಯದಲ್ಲಿ ಸರಿ ಮಾಡುವ ಕೆಲಸ ಮಾಡ್ತಿದ್ದೇವೆ. ಬಾಬಾ ಬುಡನ್ ಗಿರಿ ಹೆಸರು ಈಗಾಗಲೇ ದತ್ತಾತ್ರೇಯ ಪೀಠ ಅಂತ ಬದಲಾವಣೆ ಮಾಡಲಾಗಿದೆ ಎಂದು ಹೇಳಿದರು.