ಈ ವಾರವೂ ವೀಕೆಂಡ್ ಎಪಿಸೋಡ್ ಗೆ ಕಿಚ್ಚ ಸುದೀಪ್ ಗೈರು!

145
firstsuddi

ಬೆಂಗಳೂರು : ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಸುದೀಪ್ ಅವರು ಇದೇ ವಾರ ವೀಕ್ಷಕರ ಎದುರು ಬರಲು ಮುಂದಾಗಿರುವುದಾಗಿ ಸ್ವತಃ ಸ್ಪಷ್ಟನೆ ನೀಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಸುದೀಪ್, ಆರೋಗ್ಯ ಸುಧಾರಿಸಿದ್ದು, ಈ ವಾರ ಬಿಗ್ ಬಾಸ್ ಎಪಿಸೋಡಿನಲ್ಲಿ ಕಾಣಿಸಿಕೊಳ್ಳಲು ಕಾತುರರಾಗಿದ್ದೇನೆ ಎಂದು ಬರೆದುಕೊಂಡಿದ್ದರು. ಅಲ್ಲದೆ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಹಾಗೂ ಹಾರೈಸಿದ ಎಲ್ಲರಿಗೂ ಕೃತಜ್ಞನಾಗಿದ್ದೇನೆ ಎಂದಿದ್ದರು. ಆದರೆ ಈ ವಾರವೂ ವೀಕೆಂಡ್ ಎಪಿಸೋಡ್ ಗೆ ಕಿಚ್ಚ ಸುದೀಪ್ ಅವರು ಗೈರಾಗಲಿದ್ದಾರೆ. ಹೀಗಾಗಿ ಈ ವಾರ ವೀಕೆಂಡ್ ಎಪಿಸೋಡ್ ಗೆ ಪಾಲ್ಗೊಳ್ಳುತ್ತಾರೆ ಎಂದುಕೊಂಡಿದ್ದ ಅಭಿಮಾನಿಗಳಿಗೆ ನಿರಾಶೆ ಆಗಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದ ವಾಹಿನಿ, ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆ ಕಿಚ್ಚ ಸುದೀಪ್ ಅವರ ಜೊತೆಯಲ್ಲಿ ನಡೆಯಬೇಕಿದ್ದ ವಾರಾಂತ್ಯದ ಪಂಚಾಯ್ತಿ ಚಿತ್ರೀಕರಣ ನಡೆಯುತ್ತಿಲ್ಲ. ಹೀಗಾಗಿ ಈ ವಾರವೂ ಬಿಗ್ ಬಾಸ್ ವಾರಾಂತ್ಯದ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್ ಅವರ ಉಪಸ್ಥಿತಿ ಇರುವುದಿಲ್ಲ ಎಂದು ತಿಳಿಸಿದೆ.