ಉಕ್ರೇನ್​​ನಲ್ಲಿ ಹಾವೇರಿ ವಿದ್ಯಾರ್ಥಿ ಸಾವು.. ನವೀನ್ ತಂದೆಗೆ ಸಿಎಂ ಸಾಂತ್ವನ…

65
firstsuddi

ಬೆಂಗಳೂರು : ಉಕ್ರೇನ್ ನ ಖಾರ್ಕಿವ್ ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮಾಹಿತಿ ಗೊತ್ತಾಗುತ್ತಿದ್ದಂತೆ ನವೀನ್ ಅವರ ತಂದೆಗೆ ಕರೆ ಮಾಡಿರುವ ಸಿಎಂ ಬೊಮ್ಮಾಯಿ ಸಾಂತ್ವನ ಹೇಳಿದ್ದಾಗಿ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

ಹಾವೇರಿ ಜಿಲ್ಲೆಯ ನವೀನ್ ಗ್ಯಾನಗೌಡರ್ ಅವರ ತಂದೆ ಶೇಖರಗೌಡ ಅವರಿಗೆ ದೂರವಾಣಿ ಕರೆ ಮಾಡಿರುವ ಸಿಎಂ ಸಾವನ್ನಪ್ಪಿದ ನವೀನ್ ಬಗ್ಗೆ ಮಾಹಿತಿ ಪಡೆದರು. ಇದು ನಿಜಕ್ಕೂ ದೊಡ್ಡ ದುರಂತ. ನೀವು ಧೈರ್ಯದಿಂದಿರಿ. ನವೀನ್ ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆದಿದೆ. ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.