ಬೆಂಗಳೂರು : ಉಕ್ರೇನ್-ರಷ್ಯಾ ನಡುವಿನ ಸಂಘರ್ಷ ಹಿನ್ನಲೆಯಲ್ಲಿ ಉಕ್ರೇನ್‌ನಿಂದ ರಾಜ್ಯಕ್ಕೆ ವಾಪಸ್ ಆದವರಿಗೆ ಕೆಎಸ್ಆರ್‌ಟಿಸಿ ಬಸ್‍ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ವಿಮಾನ ನಿಲ್ದಾಣದಿಂದ ವಾಸಸ್ಥಳದವರಿಗೆ ಉಚಿತ ಪ್ರಯಾಣದ ವ್ಯವಸ್ಥೆ ದೊರೆಯಲಿದೆ.
ಈ ಬಗ್ಗೆ ನೋಡಲ್ ಅಧಿಕಾರಿಗಳು ಹಾಗೂ ಸಾರಿಗೆ ನಿಗಮದ ಅಧಿಕಾರಿಗಳು ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವಂತೆ ಕೆಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರು ಆದೇಶ ಹೊರಡಿಸಿದ್ದಾರೆ.










