ನವದೆಹಲಿ : ಉಕ್ರೇನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿರುವ ಉತ್ತರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಮಾತುಕತೆ ನಡೆಸಿದ್ದಾರೆ.
ಇದೇ ವೇಳೆ ವೈದ್ಯಕೀಯ ಶಿಕ್ಷಣ ನೀತಿ ವಿಚಾರವಾಗಿ ಹಿಂದಿನ ಸರ್ಕಾರಗಳ ವಿರುದ್ಧ ಹರಿಹಾಯ್ದ ಪ್ರಧಾನಿ ಮೋದಿ, ಹಿಂದಿನ ಸರ್ಕಾರಗಳ ಅವಧಿಯಲ್ಲಿ ವೈದ್ಯಕೀಯ ಶಿಕ್ಷಣ ನೀತಿಗಳು ಸರಿಯಾಗಿದ್ದರೆ, ನೀವು ಶಿಕ್ಷಣಕ್ಕಾಗಿ ವಿದೇಶಗಳಿಗೆ ಹೋಗುವ ಅಗತ್ಯವಿರುತ್ತಿರಲಿಲ್ಲ. ಹಿಂದಿನ ಎಲ್ಲಾ ಲೋಪಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದು ವಿದ್ಯಾರ್ಥಿಗಳಿಗೆ ಮೋದಿ ಭರವಸೆ ನೀಡಿದ್ದಾರೆ.
ಚಿಕ್ಕ ವಯಸ್ಸಿನಲ್ಲೇ ನೀವು ಸಂಕಷ್ಟದ ಸಂದರ್ಭಗಳನ್ನು ಅನುಭವಿಸಿದ್ದೀರಿ ಎಂದು ವಿದ್ಯಾರ್ಥಿಗಳ ಬಗ್ಗೆ ಪ್ರಧಾನಿ ಮೋದಿ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ಇಂತಹ ಸಂದಿಗ್ಧತೆಗಳಿಗೆ ಬಲಿಷ್ಠ ಭಾರತವೇ ಉತ್ತರವಾಗಿದೆ ಎಂದು ಹೇಳಿದ್ದಾರೆ.










