ಮಾಸ್ಕೋ : ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ಆರಂಭವಾಗಿದೆ. ಲುಹಾನ್ಸ್ಕ್ ಪ್ರದೇಶದಲ್ಲಿ ರಷ್ಯಾದ ಐದು ವಿಮಾನಗಳು ಮತ್ತು ಒಂದು ಹೆಲಿಕಾಪ್ಟರ್ ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ಮಿಲಿಟರಿ ಹೇಳಿರುವುದಾಗಿ ಎಂದು ರಾಯಿಟರ್ಸ್ ವರದಿ ಮಾಡಿದೆ.
ಈ ಮಧ್ಯೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಉಕ್ರೇನ್ ನಲ್ಲಿ ಮಾರ್ಷಲ್ ಕಾನೂನು ಜಾರಿಗೆ ತಂದಿದ್ದು, ನಾಗರಿಕರು ಶಾಂತವಾಗಿರಬೇಕೆಂದು ಮನವಿ ಮಾಡಿದ್ದಾರೆ. ರಷ್ಯಾ ವಿಶೇಷ ಕಾರ್ಯಾಚರಣೆಯನ್ನು ಘೋಷಿಸಿದಂತೆಯೇ ಡಾನ್ಬಾಸ್ ಪ್ರದೇಶದಲ್ಲಿ ವಿಶೇಷ ಮಿಲಿಟರಿ ಕಾರ್ಯಾಚರಣೆಯನ್ನು ಉಕ್ರೇನ್ ಘೋಷಿಸಿದೆ ಎಂದು ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ವ್ಲಾಡಿಮಿರ್ ಪುಟಿನ್ ಇಂದು ಉಕ್ರೇನ್ ಮೇಲೆ ದಾಳಿ ಮಾಡುವುದಾಗಿ ಘೋಷಿಸಿದಾಗ ಎಲ್ಲ ಕಡೆ ಇದು ಸಂಚಲನ ಸೃಷ್ಟಿ ಮಾಡಿತ್ತು. ಯುದ್ಧ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಉಕ್ರೇನ್ ನಲ್ಲಿ ಸ್ಫೋಟಗಳು ಕೇಳಿಬಂದವು. ಈ ವೇಳೆ ವಿದೇಶಾಂಗ ಸಚಿವರು ಉಕ್ರೇನ್ ಮೇಲೆ ರಷ್ಯಾ ‘ಪೂರ್ಣ ಪ್ರಮಾಣದ ಆಕ್ರಮಣ’ ನಡೆಸುತ್ತಿದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.










