ಗದಗ : ಜಮ್ಮು ಕಾಶ್ಮೀರಾದ ಉರಿ ಸೆಕ್ಟರ್‍ನಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಗದಗ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಜಿಲ್ಲೆಯ ಹೊಳೆ ಆಲೂರು ಸಮೀಪದ ಕರಮುಡಿ ಗ್ರಾಮದ ವೀರೇಶ ಕುರಹಟ್ಟಿ(40) ಹುತಾತ್ಮ ಯೋಧ ಎಂದು ಗುರುತಿಸಲಾಗಿದ್ದು, ವೀರೇಶ ಕುರಹಟ್ಟಿ ಅವರಿಗೆ ಜಮ್ಮು ಕಾಶ್ಮೀರಾದ ಉರಿ ಸೆಕ್ಟರ್‍ನಲ್ಲಿ ಪೋಸ್ಟಿಂಗ್ ಹಾಕಲಾಗಿತ್ತು. ಈ ವೇಳೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಯೋಧ ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದ್ದು,ಹುತಾತ್ಮ ಯೋಧನ ಪಾರ್ಥೀವ ಶರೀರ ನಾಳೆ ತಮ್ಮ ಸ್ವಗ್ರಾಮಕ್ಕೆ ತಲುಪಲಿದ್ದು, ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ಹುತಾತ್ಮ ಯೋಧನ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ.










