ಶ್ರೀನಗರ : ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭರತೀಯ ಯೋಧರು ಈರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ. ದಕ್ಷಿಣ ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಕನಿಗಮ್ ಎಂಬ ಪ್ರದೇಶದಲ್ಲಿ ಕೆಲವು ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿಯನ್ನು ತಿಳಿದ ಯೋಧರು ಪ್ರದೇಶವನ್ನು ಸುತ್ತುವರೆದು ಶೋಧಕಾರ್ಯ ಆರಂಭಿಸಿದ್ದಾರೆ. ಈ ವೇಳೆ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಪ್ರತಿದಾಳಿ ನಡೆಸಿದ ಯೋಧರು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೇನಾ ಮುಲಗಳಿಂದ ತಿಳಿದು ಬಂದಿದೆ.










