ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ-ಓರ್ವ ಉಗ್ರನ ಹತ್ಯೆ…

109
firstsuddi

ಶ್ರೀನಗರ : ಉಗ್ರರು ಹಾಗೂ ಯೋಧರ ನಡುವೆ ನಡೆದ ಎನ್‍ಕೌಂಟರ್‍ನಲ್ಲಿ ಭಾರತೀಯ ಯೋಧರು ಓರ್ವ ಉಗ್ರನನ್ನು ಹೋಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಅನಂತ್‍ನಾಗ್ ಜಿಲ್ಲೆಯ ಸ್ರಿಗುಫ್ವಾರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿಯನ್ನು ತಿಳೀದ ಯೋಧರು ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ವೇಳೆ ಇಂದು ನುಸುಕಿನ ಜಾವ ಉಗ್ರರು ಯೋಧರತ್ತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಶೋಧಕಾರ್ಯ ಮುಂದುವರೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.