ಉಚಿತವಾಗಿ ಕೊರೊನಾ ಲಸಿಕೆ ನೀಡಿದ ಕಾರಣ ಪೆಟ್ರೋಲ್ ಬೆಲೆ ಏರಿಕೆ : ಸಚಿವ ರಾಮೇಶ್ವರ್ ತೇಲಿ.

67
firstsuddi

ನವದೆಹಲಿ : ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ ಕಾರಣ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯ ರಾಜ್ಯ ಖಾತೆ ಸಚಿವ ರಾಮೇಶ್ವರ್ ತೇಲಿ ಹೇಳಿದ್ದಾರೆ.

ಅಸ್ಸಾಂನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂಧನ ಬೆಲೆ ಹೆಚ್ಚಿಲ್ಲ, ಅದು ತೆರಿಗೆಗಳನ್ನು ಒಳಗೊಂಡಿದೆ. ನೀವು ಉಚಿತ ಲಸಿಕೆಯನ್ನು ಪಡೆಯಬೇಕೆಂದರೆ, ಅದಕ್ಕೆ ಹಣ ಎಲ್ಲಿಂದ ಬರುತ್ತದೆ? ಲಸಿಕೆಗೆ ನೀವು ಹಣ ಪಾವತಿಸಿಲ್ಲ. ಹಾಗಾಗಿ ತೆರಿಗೆ ಮೂಲಕ ಹಣ ಸಂಗ್ರಹಿಸಲಾಗಿದೆ. ದೇಶದ 130 ಕೋಟಿ ಜನರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡುವ ಗುರಿಯನ್ನು ನಮ್ಮ ಕೇಂದ್ರ ಸರ್ಕಾರ ಹೊಂದಿದೆ. ಪ್ರತಿಯೊಬ್ಬರೂ ಎರಡು ಡೋಸ್ ಪಡೆಯಬೇಕು. ಪ್ರತಿ ಲಸಿಕೆಯ ಬೆಲೆ 1200 ರೂಪಾಯಿ ವೆಚ್ಚವಾಗುತ್ತದೆ. ಲಸಿಕೆ ಹಣವನ್ನು ಪೆಟ್ರೋಲ್ ತೆರಿಗೆ ಮೂಲಕವಾಗಿ ಪಡೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ.